ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌ ಸೇರಿದಂತೆ 25 ಕ್ಕೂ ಹೆಚ್ಚು ನಟ ನಟಿಯರ ವಿರುದ್ಧ ದೂರು ದಾಖಲು

0
Spread the love

ಹೈದರಾಬಾದ್‌: ಬೆಟ್ಟಿಂಗ್‌ ಅಪ್ಲಿಕೇಶನ್‌ ಪ್ರಚಾರ ಮಾಡಿದ್ದಕ್ಕೆ ಖ್ಯಾತ ನಟರಾದ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್‌ ರಾಜ್‌ ಸೇರಿದಂತೆ 25 ಕ್ಕೂ ಹೆಚ್ಚು ನಟ ನಟಿಯರ ವಿರುದ್ಧ ದೂರು ದಾಖಲಾಗಿದೆ.

Advertisement

ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವರು ನೀಡಿದ ದೂರಿನ ಮೇಲೆ ಹೈದರಾಬಾದ್‌ನ ಮಿಯಾಪುರ್ ಪೊಲೀಸರು ಟಾಲಿವುಡ್ ನ 25ಕ್ಕೂ ಹೆಚ್ಚು ನಟರು ಮತ್ತು ಸೋಶಿಯಲ್‌ ಮೀಡಿಯಾ ಇನ್‌ಫ್ಲೂಯನ್ಸ್‌ರ್‌ಗಳ ಮೇಲೆ ಕೇಸ್‌ ದಾಖಲಿಸಿದ್ದಾರೆ.

ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್ , ಅನನ್ಯಾ, ಶ್ರೀಮುಖಿ, ಸಿರಿ ಹನುಮಂತು, ಶ್ಯಾಮಲಾ, ವರ್ಷಿಣಿ, ಶೋಭಾ, ನೇಹಾ, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಸನ್ನಿ ಯಾದವ್, ಟೇಸ್ಟಿ ತೇಜಾ ಮತ್ತು ರಿತು ಸೇರಿದಂತೆ ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಖ್ಯಾತ ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಉದ್ದೇಶಪೂರ್ವಕವಾಗಿ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಯುವ ಜನರ ಮನಸ್ಸು ಹಾಳಾಗುತ್ತಿದೆ. ಇದರಿಂದ ಸಾಕಷ್ಟು ಮಂದಿಯ ಕುಟುಂಬ ಆರ್ಥಿಕ ತೊಂದರೆ ಎದುರಿಸುತ್ತಿದೆ ಎಂದು ಫಣೀಂದ್ರ ಶರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ. ಈ ಆಪ್‌ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಟ್ಟಿಂಗ್ ಆಪ್ ಪ್ರಚಾರಕ್ಕೆ ತೆಲಂಗಾಣ ಸರ್ಕಾರ ಈಗಾಗಲೇ ನಿಷೇಧ ಹೇರಿದೆ. ಇದರ ಹೊರತಾಗಿಯೂ ಬೆಟ್ಟಿಂ ಗ್ಆಪ್ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ಫಣೀಂದ್ರ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here