ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊಸ ವಿವಾದ ಉದ್ಭವಿಸಿದೆ.
ಈ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ದಾಖಲಿಸಲಾಗಿದೆ.
ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ ಅವರು, ಜೈಲಿನೊಳಗೆ ಪವಿತ್ರಾಗೌಡ ಅವರಿಗೆ ಅಧಿಕಾರಿಗಳ ಸಹಕಾರ ದೊರೆಯುತ್ತಿದ್ದು, ಪ್ರತಿದಿನ ವಿಶೇಷ ಊಟ ಸೇರಿದಂತೆ ಸೌಲಭ್ಯಗಳು ನೀಡಲಾಗುತ್ತಿವೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಇತ್ತ ಈ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿರುವ ಪವಿತ್ರಾಗೌಡ ಅವರು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಜೈಲಿನೊಳಗಿನಿಂದಲೇ ದೂರು ಸಲ್ಲಿಸಿದ್ದಾರೆ. ಜೊತೆಗೆ ರಶ್ಮಿ ಎಂಬ ಮತ್ತೊಬ್ಬ ಆರೋಪಿಯೂ ಪ್ರತ್ಯೇಕ ದೂರು ನೀಡಿರುವುದಾಗಿ ತಿಳಿದುಬಂದಿದೆ.
ಸದ್ಯ ಜೈಲಿನಲ್ಲಿರುವ ಪವಿತ್ರಾಗೌಡ ತಮ್ಮ ಆತ್ಮಚರಿತ್ರೆ ಬರೆಯಲು ಆರಂಭಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



