ಬೆಂಗಳೂರು:- ಧರ್ಮಸ್ಥಳದ ಷಡ್ಯಂತ್ರದ ರುವಾರಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ.
Advertisement
ರೌಡಿಶೀಟರ್ ಮದನ್ ಬುಗಾಡಿ ಎಂಬಾತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ.
ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದಬಂದಿದೆ.