• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪ್ರಕರಣಗಳ ಇತ್ಯರ್ಥಕ್ಕೆ ಸೂಚನೆ : ಅಮರ ನಾರಾಯಣ ಕೆ

News Desk by News Desk
June 16, 2024
in Gadag News
Complaint hearing and case disposal meeting
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಲೋಕಾಯುಕ್ತ ಉಪನಿಬಂಧಕ ಅಮರ ನಾರಾಯಣ ಕೆ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ಸಭೆ ಜರುಗಿತು.

ಗದಗ ನಗರದ ನಾಗೇಶ ಕುರಡಿಕೇರಿ ತಮ್ಮ ಮನೆಯ ಹತ್ತಿರ ಕೈಮಗ್ಗ ಯಂತ್ರವು ರಾತ್ರಿಯಿಡೀ ಚಾಲ್ತಿಯಲ್ಲಿರುವುದರಿಂದ ರಾತ್ರಿ ನೆಮ್ಮದಿಯಿಂದ ಇರಲಾಗುತ್ತಿಲ್ಲ ಎಂದು ದೂರು ನೀಡಿದರು. ಅದಕ್ಕೆ ಲೋಕಾಯುಕ್ತ ಉಪನಿಬಂಧಕರು ಜವಳಿ ಮತ್ತು ಕೈಮಗ್ಗ ಇಲಾಖೆಯ ಅಧಿಕಾರಿಗಳಿಗೆ ಸರ್ಕಾರದ ನಿಯಮದನ್ವಯ ರಾತ್ರಿ ಎಲ್ಲಿಯವರೆಗೆ ಯಂತ್ರ ಚಾಲಾಯಿಸಲು ಅವಕಾಶವಿದೆಯೋ ಅಲ್ಲಿಯವರಗೆ ಮಾತ್ರ ಅವಕಾಶ ಕಲ್ಪಿಸಿ ಎಂದು ಸೂಚಿಸಿದರು.

ಗದಗ ತಾಲೂಕಿನ ಬಸಾಪೂರ ಗ್ರಾಮದ ಹನುಮಂತ ವಡ್ಡರ ಅವರ ಮನೆ ಸುತ್ತಮುತ್ತ ಕಲ್ಲು ಒಡೆದು ಅಕ್ರಮವಾಗಿ ಗಣಿಗಾರಿಕೆ ಮಾಡುವುದರಿಂದ ಅಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಅನೇಕ ಬಾರಿ ಪೊಲೀಸ್ ಇಲಾಖೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ದೂರು ನೀಡಿದರು.

ಲೋಕಾಯುಕ್ತ ಉಪನಿಬಂಧಕರು, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳಿಗೆ ತಕ್ಷಣ ಸ್ಥಳ ಪರಿಶೀಲಿಸಿ ಅಂತಹ ಅಕ್ರಮ ಗಣಿಗಾರಿಕೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದರು.

ನಂತರ ಚಾಂದಸಾಬ ಕುತುದುದ್ದಿನ ಮುಳಗುಂದ, ಹಲವಾರು ಬಾರಿ ಮಾಹಿತಿ ಹಕ್ಕು ಅರ್ಜಿಯನ್ನು ಶಿರಹಟ್ಟಿಯ ಪಟ್ಟಣ ಪಂಚಾಯತಗೆ ನೀಡಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ದೂರು ನೀಡಿದರು. ಅದಕ್ಕೆ ಉಪನಿಬಂಧಕರು, ಈ ವಿಷಯವು ಮಾಹಿತಿ ಹಕ್ಕಿನ ಅಯೋಗಕ್ಕೆ ಸಂಬಂಧಿಸಿದ್ದು, ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಸರಿಯಾದ ಮಾಹಿತಿ ದೊರೆಯದಿದ್ದರೆ ಮೇಲ್ಮನವಿ ಹೋಗಲು ದೂರುದಾರನಿಗೆ ತಿಳಿಸಿದರು.

ಗದಗ ನಗರದ 35ನೇ ವಾರ್ಡಿನ ವಿಶ್ವೇಶ್ವರಯ್ಯ ನಗರದ ಕಾಶೀನಾಥ ಬೀಳಗಿಯವರು ತಮ್ಮ ವಾರ್ಡ್ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಹಲವಾರು ಬಾರಿ ನಗರಸಭೆಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರು ನೀಡಿದರು. ನಗರಸಭೆಯ ಪೌರಾಯುಕ್ತರಿಗೆ ದೂರನ್ನು ಗಂಭಿರವಾಗಿ ಪರಿಗಣಿಸಿ, ಆದಷ್ಟು ಬೇಗ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಸೂಚಿಸಿದರು.

ಹರ್ಲಾಪುರ ಗ್ರಾಮದ ಶಿವಾನಂದ ಪಟ್ಟೇದ ತಮ್ಮ ಗ್ರಾಮದಲ್ಲಿ ನಿರ್ಮಾಣವಾದ ವಸತಿ ನಿಲಯವು ಕ್ರಿಯಾಯೋಜನೆ ಹಾಗೆ ಕಾಮಗಾರಿ ನಡೆದಿಲ್ಲ ಎಂದು ಆರ್.ಡಿ.ಪಿ.ಆರ್ ಇಲಾಖೆಯ ಮೇಲೆ ದೂರು ನೀಡಿದರು. ಅದಕ್ಕೆ ಉಪನಿಬಂಧಕರು ಕಾಮಗಾರಿಯನ್ನು ಪರೀಶಿಲಿಸಿ ಪ್ರಾಥಮಿಕ ವರದಿ ನೀಡಲು ಸೂಚಿಸಿದರು.

ಗದಗ ನಗರದ ಪ್ರಕಾಶ ಕಲ್ಮನಿ, ಬಾಬು ಜಗಜೀವನರಾವ್ ಅಭಿವೃದ್ಧಿ ನಿಗಮದಿಂದ ಒಂದೇ ಸಮುದಾಯದವರಿಗೆ 250 ಮನೆಗಳನ್ನು ನೀಡಿದ್ದು, ಉಳಿದವರಿಗೆ ನೀಡಿಲ್ಲ ಎಂದು ದೂರು ನೀಡಿದರು.

ದೂರು ಆಲಿಸಿದ ಉಪನಿಬಂಧಕರು, ಬಾಬು ಜಗಜೀವನರಾವ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಿಗೆ ಪ್ರಕರಣ ಬಗ್ಗೆ ಸರಿಯಾಗಿ ಪರಿಶೀಲಿಸಿ ವರದಿ ನೀಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಉಪಲೋಕಾಯುಕ್ತರ ಆಪ್ತಕಾರ್ಯದರ್ಶಿ ಕಿರಣ ಪಿಎಂ ಪಾಟೀಲ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಹೀರೆಹಾಳ ಗ್ರಾಮದ ಶಂಕರಗೌಡ ವೀರಣ್ಣಗೌಡ ಅವರು ತಮ್ಮ ಊರಿನ ಸೊಸೈಟಿಯಲ್ಲಿ ರೈತರಿಗೆ ಸಾಲ ನೀಡುವಲ್ಲಿ ಅವ್ಯವಹಾರ ಮಾಡಿದ್ದು, ಯಾವುದೇ ರೀತಿಯ ಖಾತೆಗಳಾಗಲಿ, ಭದ್ರತಾ ಠೇವಣಿಗಳು ಇರುವುದಿಲ್ಲ ಎಂದು ದೂರು ನೀಡಿದರು. ಅದಕ್ಕೆ ಉಪನಿಬಂಧಕರು ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಪರಿಶೀಲಿಸಿ ವರದಿ ನೀಡಬೇಕೆಂದು ಸೂಚಿಸಿದರು.

Tags: Complaint hearing and case disposal meetingGadaggadaganewsLatestNewsLokayukta Deputy Amara Narayana Kupdatenews
ShareSendShare
Previous Post

ಕಣ್ಣಿನ ಉಚಿತ ತಪಾಸಣಾ ಶಿಬಿರ

Next Post

ಶೀಘ್ರವೇ ಬಾಕಿಯಿರುವ ಪ್ರಕರಣಗಳ ಇತ್ಯರ್ಥ

News Desk

News Desk

Next Post
Upalokayukta Justice Press conference by K.N. Phanindra

ಶೀಘ್ರವೇ ಬಾಕಿಯಿರುವ ಪ್ರಕರಣಗಳ ಇತ್ಯರ್ಥ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

November 8, 2026
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

November 8, 2026
ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

November 8, 2026
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

November 8, 2026
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

November 8, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper