ಬೆಂಗಳೂರು:- ಮುಖ್ಯಮಂತ್ರಿ ಸಿದ್ಧರಾಮಯ್ಯವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ನೀಡಿದ್ದಾರೆ.
2013 ರ ವಿಧಾನಸಭಾ ಚುನಾವಣೆಯ ಅಫಿಡವಿಟ್ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ?
ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ 2010 ರಲ್ಲಿ ಈ ಜಾಗವನ್ನು ಗಿಫ್ಟ್ ಡೀಡ್ ಆಗಿ ನೋಂದಣಿ ಮಾಡಿದ್ದಾರೆ. ಈ ಜಾಗದ ಮೂಲ ಮಾಲೀಕರು ದೇವರಾಜು ಮತ್ತು ಕುಟುಂಬಸ್ಥರು ಆಗಿದ್ದು ಆಗಸ್ಟ್ 25, 2004 ರಂದು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಈ ಜಾಗವನ್ನು ಮಾರಾಟ ಮಾಡಿದ್ದಾರೆ. ಈ ಅವಧಿಯಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ಪಕ್ಷದಲ್ಲಿದ್ದು ಕರ್ನಾಟಕ ಉಪ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು
ಸಹೋದರ ಪಾರ್ವತಿ ಅವರಿಗೆ ಗಿಫ್ಟ್ ಡೀಡ್ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದ ಶಾಸಕರು ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದರು. ಅಚ್ಚರಿಯ ವಿಷಯ ಏನೆಂದರೆ ಮಾರ್ಚ್ 31, 2013ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದ ವಾರ್ಷಿಕ ರಿಟರ್ನ್ ಲೋಕಾಯುಕ್ತಕ್ಕೆ ಸಲ್ಲಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಪತ್ನಿ ಬಳಿ ಇದ್ದ ನಿವೇಶನದ ವಿವರವನ್ನು ಉಲ್ಲೇಖಿಸಿದ್ದಾರೆ. ಆದರೆ 2013ರ ಚುನಾವಣೆಯ ಅಫಿಡವಿಟ್ ಸಲ್ಲಿಸುವಾಗ ಈ ವಿಚಾರವನ್ನು ಉದ್ದೇಶಪೂರ್ವಕವಾಗಿ ಉಲ್ಲೇಖ ಮಾಡಿಲ್ಲ.
ಕೃಷಿ ಭೂಮಿಯ ಬಗ್ಗೆಯ ಮಾಹಿತಿ ನೀಡದೇ ಸುಳ್ಳು ಅಫಿಡವಿಟ್ ಸಲ್ಲಿಸಿದ್ದು ಜನಪ್ರತಿ ನಿಧಿ ಕಾಯ್ದೆ ಸೆಕ್ಷನ್ 125 ಎ ಮತ್ತು ಸೆಕ್ಷನ್ 8 ಉಲ್ಲಂಘನೆ. ಸುಳ್ಳು ದಾಖಲೆ ಸಲ್ಲಿಸಿದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ 227, 229, 231, 236, 202 ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದಿದ್ದಾರೆ.
[7:17 am, 11/7/2024] Sahanamandya: ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಸಿದ್ದರಾಮಯ್ಯ: ಚುನಾವಣಾ ಆಯೋಗಕ್ಕೆ ದೂರು!
Siddaramaiah hid his wife’s property details: Complaint to the Election Commission!
ನವದೆಹಲಿ:- ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸಿದ್ಧರಾಮಯ್ಯವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
12 ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯ ಅಫಿಡವಿಟ್ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.