ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯಪಾಲರಿಗೆ ದೂರು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ-ಎಸ್.ಟಿ, ಹಿಂದುಳಿದ ವರ್ಗಗಳ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡು ಎಸ್.ಸಿ-ಎಸ್.ಟಿ,, ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಫೆ.27ರ ಬೆಳಿಗ್ಗೆ 10.30 ಗಂಟೆಗೆ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಿಂದ ಗದಗ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವದು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

Advertisement

ಮಾಜಿ ಸಚಿವರುಗಳಾದ ಸಿ.ಸಿ. ಪಾಟೀಲ, ಕಳಕಪ್ಪ ಬಂಡಿ, ಶಾಸಕರಾದ ಡಾ. ಚಂದ್ರು ಲಮಾಣಿ, ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ವಿ.ಪ ಸದಸ್ಯ ಎಸ್.ವ್ಹಿ. ಸಂಕನೂರ, ಜನಾಂದೋಲನ ರಾಜ್ಯ ತಂಡದ ಉಸ್ತುವಾರಿಗಳಾದ ಸುನೀಲ್ ವಲ್ಯಾಪುರೆ, ಬಸವರಾಜ ದಢೇಸಗೂರ್, ಮಂಜುಳಾ ಲಿಂಬಾವಳಿ, ಜಗದೀಶ ಹಿರೇಮನಿ, ಬಸವರಾಯ ನಾಯ್ಕ ಮಾಯಕೊಂಡ, ಪಳನಿವೇಲು, ಮಹೇಂದ್ರ ಕೌತಾಳ, ಮಂಜುನಾಥ ಹೂಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮಪ್ಪ ಚವ್ಹಾಣ, ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಪ್ರಮುಖರು ಹಾಗು ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಗದಗ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮುಳಗುಂದ, ಎಸ್.ಟಿ. ಮೋರ್ಚಾ ಅಧ್ಯಕ್ಷ ಈಶ್ವರಪ್ಪ ರಂಗಪ್ಪನವರ, ಪ್ರಧಾನ ಕಾರ್ಯದರ್ಶಿ ವಾಯ್.ಪಿ. ಅಡ್ನೂರ, ಯಲ್ಲಪ್ಪ ಶಿರಿ, ಸುರೇಶ ಚಲವಾದಿ, ಮಲ್ಲಪ್ಪ ಮಾದರ, ಸಿದ್ದೇಶ ಹೂಗಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here