HomeDharwadನಿಗದಿತ ಸಮಯದೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ನಿಗದಿತ ಸಮಯದೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೋಮವಾರದಿಂದ ರಾಜ್ಯಾದ್ಯಂತ ಆರಂಭಿಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಧಾರವಾಡ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅವಳಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದರು.

ಅವರು ಧಾರವಾಡ ನಗರದ ಪೆಂಡಾರಗಲ್ಲಿ, ತಡಕೋಡ ಓಣಿ ಪ್ರದೇಶಗಳಲ್ಲಿ ಸಂಚರಿಸಿ, ಸಮೀಕ್ಷಕರು ಮಾಡುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪರಿಶೀಲಿಸಿ, ಸಮೀಕ್ಷೆದಾರರಿಂದ ಮಾಹಿತಿ ಪಡೆದು, ಮಾರ್ಗದರ್ಶನ ಮಾಡಿದರು.

ಪೆಂಡಾರಗಲ್ಲಿಯ ರೇಣುಕಾ ಬೋಮ್ಮಣ್ಣವರ ಮನೆಯ ಕುಟುಂಬ ಸಮೀಕ್ಷೆಯಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು, ಕುಟುಂಬದ ಮುಖ್ಯಸ್ಥೆ ರೇಣುಕಾ ಅವರಿಂದ ಸಮೀಕ್ಷಾ ಪ್ರಶ್ನಾವಳಿ ಕುರಿತು ಮಾಹಿತಿ ಪಡೆದು, ಸಮೀಕ್ಷೆಯ ಉಪಯುಕ್ತತೆಯನ್ನು ವಿವರಿಸಿದರು.

ಸಮೀಕ್ಷಾ ಪ್ರದೇಶಗಳ ಭೇಟಿ ಸಮಯದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಸಮೀಕ್ಷಕರಿಗೆ ತರಬೇತಿ ನೀಡಲಾಗಿದೆ. ಸಮೀಕ್ಷೆಗೆ ನಿಯೋಜನೆ ಆಗಿರುವ ಸಿಬ್ಬಂದಿಗಳು ತಮಗೆ ಹಂಚಿಕೆ ಆಗಿರುವ ಮನೆ, ಕುಟುಂಬಗಳ ಮಾಹಿತಿಯನ್ನು ನಿಯಮಾನುಸಾರ ಭರ್ತಿ ಮಾಡಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾ ತಾಂತ್ರಿಕ ಸಮಾಲೋಚಕರಿಗೆ ಅಥವಾ ಸಹಾಯವಾಣಿಗೆ ಕರೆ ಮಾಡಿ, ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಮೀಕ್ಷಕರು ತಮಗೆ ಗುರುತಿಸಿರುವ ಎಲ್ಲ ಮನೆ ಹಾಗೂ ಕುಟುಂಬಗಳ ಸಮೀಕ್ಷೆಯನ್ನು ಅಕ್ಟೋಬರ್ 7ರೊಳಗೆ ಪೂರ್ಣಗೊಳಿಸಬೇಕು. ಪ್ರತಿದಿನ ಸಂಜೆ ಅಂದಿನ ಸಮೀಕ್ಷೆ ಕಾರ್ಯದ ಪ್ರಗತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಹೇಳಿದರು.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಒಟ್ಟು 16 ದಿನಗಳ ಕಾಲ ಸಮೀಕ್ಷೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ ಸುಮಾರು 5 ಲಕ್ಷ 46 ಸಾವಿರ ಕುಟುಂಬಗಳನ್ನು ಗುರುತಿಸಲಾಗಿದೆ. ಇದನ್ನು ಹೆಸ್ಕಾಂ ಇಲಾಖೆ ಮುಖಾಂತರ ಪ್ರತಿಯೊಂದು ಮನೆಗೂ ಪ್ರತ್ಯೇಕವಾಗಿ ಐಡಿ ಕೊಡುವ ಮುಖಾಂತರ ಅದನ್ನು ಗುರುತಿಸಿ, 150ರಿಂದ 200 ಮನೆಗಳನ್ನು ಒಂದು ಗುಂಪಾಗಿ ವಿಂಗಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಭಾನುಮತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ತಾಲೂಕು ವಿಸ್ತರಣಾ ಅಧಿಕಾರಿ ಸಂಜೀವ ಕೆಸರಿ, ಬ್ಲಾಕ್ ಮೇಲ್ವಿಚಾರಕರು, ನಿಲಯಪಾಲಕರು, ಸಮೀಕ್ಷಕರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 4,880 ಸಮೀಕ್ಷಕರು ಮತ್ತು ಮೇಲ್ವಿಚಾರಣೆ ಮಾಡುವುದಕ್ಕೆ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಪ್ರತಿ ಹಂತದಲ್ಲೂ ರಾಜ್ಯ, ಜಿಲ್ಲಾ, ಒಂದು ಬ್ಲಾಕ್ ಮಟ್ಟದಲ್ಲಿ ತರಬೇತಿಯನ್ನು ನೀಡಲು ಮಾಸ್ಟರ್ ಟ್ರೈನರ್‌ಗಳನ್ನು ಆಯ್ಕೆ ಮಾಡಿ ತರಬೇತಿ ನೀಡಲಾಗಿದೆ. ಸಂಬಂಧಪಟ್ಟ ಶಾಸಕರ ಗಮನಕ್ಕೆ ತೆಗೆದುಕೊಂಡು ಬಂದು, ಇಂದು ಚಾಲನೆ ನೀಡಿದೆ. ಎಲ್ಲಾ ಸಾರ್ವಜನಿಕರು ಕೈ ಜೋಡಿಸಿ ಸಮೀಕ್ಷೆಯನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!