ಕಡ್ಡಾಯ ಮತದಾನ ನಮ್ಮ ಹಕ್ಕು : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

0
jagruti
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಕಡ್ಡಾಯ ಮತದಾನ ನಮ್ಮ ಹಕ್ಕಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

Advertisement

ಜಿಲ್ಲಾ ಆಡಳಿತ ಭವನ ಮುಂಭಾಗದಿಂದ ಗದಗ ತಾಲೂಕು ಪಂಚಾಯಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನರ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ. ಹೆದರಿಕೆ-ಬೆದರಿಕೆಗೆ ಅಂಜದೆ ಧೈರ್ಯವಾಗಿ ಮತ ಚಲಾಯಿಸಿ ಎಂದರು.

ಕಚೇರಿಯಿಂದ ಮತದಾನ ಜಾಗೃತಿ ಜಾಥಾ ಆರಂಭವಾಗಿ ಮುಳಗುಂದ ನಾಕಾ, ಜೋಡ ಮಾರುತಿ ದೇವಸ್ಥಾನ, ಬಸವೇಶ್ವರ ಸರ್ಕಲ್, ಹುಯಿಲಗೋಳ ಸರ್ಕಲ್, ಮಹೇಂದರ್ ಸರ್ಕಲ್, ಗಾಂಧಿ ಸರ್ಕಲ್ ಮೂಲಕ ಸಂಚರಿಸಿ ಗಾಂಧಿ ಸರ್ಕಲ್‌ವರೆಗೆ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.

ಜಾಥಾದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮಾನಿಕರಾವ್ ಪಾಟೀಲ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಅಧಿಕಾರಿ ಮಾಂತೇಶ್ ಕೆ, ತಾ.ಪಂ ಎಂಆರ್‌ಡಬ್ಲೂ ಖಾಜಾಹುಸೇನ್ ಕಾತರಕಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here