ಎನ್‌ಎಸ್‌ಎಸ್‌ನಿಂದ ಸೇವಾ ಮನೋಭಾವ ವೃದ್ಧಿ

0
Concluding ceremony of National Spirituality Camp
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಯುವಕರಿಗೆ ಸಮಾಜ ಸೇವೆ ಮಾಡಲು ಮತ್ತು ರಾಷ್ಟ್ರೀಯತೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ.ಬಸವರಾಜು ಹೇಳಿದರು.

Advertisement

ಬುಧವಾರ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ರಾಜ್ಯ ಎನ್‌ಎಸ್‌ಎಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್‌ನ ಪ್ರಾದೇಶಿಕ ನಿರ್ದೇಶನಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಎನ್‌ಎಸ್‌ಎಸ್ ಆಯೋಜಿಸುವ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಯುವಕರಲ್ಲಿ ಏಕತೆ ಮತ್ತು ಸಮಗ್ರತೆಯ ಭಾವನೆ ಮೂಡುತ್ತದೆ. ಹಾಗಾಗಿ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು. ಭಾಷೆ ಬೇರೆಯಾದರೂ ಏಕತೆಯ ಸಂಸ್ಕೃತಿಯನ್ನು ಭಾರತೀಯ ಭಾವೈಕ್ಯತೆಯಲ್ಲಿ ಕಾಣಬಹುದು ಎಂದರು.

ಬೆಂಗಳೂರು ಗಾಂಧಿ ಭವನದ ನಿರ್ದೇಶಕ ಜಿ.ಬಿ. ಶಿವರಾಜು ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯುತ ನಾಗರಿಕರಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ಸಮಾಜದ ಬಗ್ಗೆ ಜವಾಬ್ದಾರಿಯನ್ನು ತೆಗೆದುಕೊಂಡಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ರಿಜಿಸ್ಟಾçರ್ ಅನುರಾಧಾ ವಸ್ತçದ, ವಿಶ್ವವಿದ್ಯಾಲಯದ ಡೀನ್ ಮತ್ತು ಹಣಕಾಸು ಅಧಿಕಾರಿ ಡಾ. ಜಿ.ಬಿ. ಪಾಟೀಲ, ಮೌಲ್ಯಮಾಪನ ರಿಜಿಸ್ಟಾçರ್ ಡಾ. ರತ್ನಾ ಆರ್.ಭರಮಗೌಡ್ರ, ವಿವಿಯ ಎನ್‌ಎಸ್‌ಎಸ್ ಸಂಯೋಜಕರಾದ ಐ.ಬಿ. ಬಿರಾದಾರ, ಸಿಂಡಿಕೇಟ್ ಸದಸ್ಯರಾದ ಹೆಚ್.ವಿ. ಬೆಳಗಲಿ, ವಸಂತ ಲದವಾ, ಕಾನೂನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ವಿವಿಧ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಬೆಂಗಳೂರು ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ. ಕಾರ್ತಿಗೇಯನ್ ಮಾತನಾಡಿ, ರಾಷ್ಟ್ರೀಯ ಭಾವೈಕ್ಯತಾ ಶಿಬಿರವು ಯುವಕರಿಗೆ ಮಾತನಾಡುವ ಶೈಲಿ, ಹಿರಿಯರಿಗೆ ಗೌರವ ನೀಡುವುದರ ಬಗ್ಗೆ ತಿಳಿಸಿಕೊಡಲಿದೆ. ಸಂಸ್ಕೃತಿ, ಭಾಷೆ, ಸಹೋದರ ಮನೋಭಾವವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ. ಈ ಅಂಶಗಳು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಉಪಯೋಗಕಾರಿಯಾಗಲಿವೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here