ವಿಜಯಸಾಕ್ಷಿ ಸುದ್ದಿ, ಗದಗ : ನಟರಂಗ ಕಲ್ಚರಲ್ ಅಕಾಡೆಮಿ & ಟ್ರಸ್ಟ್ ಗದಗ ವತಿಯಿಂದ ಮಕ್ಕಳ ಕಲರವ-2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜರುಗಿತು.
ಸಮಾರಂಭದ ಉದ್ಘಾಟನೆಯನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ನೆರವೇರಿಸಿದರು. ಗೌರವಾಧ್ಯಕ್ಷತೆಯನ್ನು ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಮ್ಯಾಗೇರಿ ಅಧ್ಯಕ್ಷತೆಯನ್ನು ಕುಲಸಚಿವ ಪ್ರೊ. ಡಾ. ಸುರೇಶ ವಿ.ನಾಡಗೌಡರ, ಹಿರಿಯ ಚಿತ್ರನಟ ದೊಡ್ಡಣ, ಬ್ಯಾಡಗಿಯ ಬಿಜೆಪಿ ಮುಖಂಡ ಮುರಿಗೆಪ್ಪ ಶೆಟ್ಟರ್, ಮಲ್ಲಿಕಾರ್ಜುನ ಖಂಡಮ್ಮನವ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಕಳಸಾಪೂರ ಬಸವಕೇಂದ್ರದ ಕಾರ್ಯಾಧ್ಯಕ್ಷ, ಕನ್ನಡಾಭಿಮಾನಿ ಮಲ್ಲಿಕಾರ್ಜುನ ಖಂಡಮ್ಮನವರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರನಟ ದೊಡ್ಡಣ್ಣ, ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಕನ್ನಡ ಅಭಿಮಾನಿ ಮಲ್ಲಿಕಾರ್ಜುನ ಖಂಡಮ್ಮನವರನ್ನು ಸನ್ಮಾನಿಸುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಅವರ ಕನ್ನಡ ಪ್ರೇಮವನ್ನು ಎಷ್ಟು ಹೊಗಳಿದರೂ ಸಾಲದು ಎಂದು ಹೇಳಿದರು.
ಕಾರ್ಯಕ್ರಮದ ಆಯೋಜಕ ನಟರಂಗ್ ಸಂಸ್ಥೆಯ ಅಧ್ಯಕ್ಷ ಸೋಮಶೇಖರ ಚಿಕ್ಕಮಠ ಮಾತನಾಡಿದರು.
ಗದುಗಿನ ರೋಟರಿ ಸೆಂಟ್ರಲ್ ಅಧ್ಯಕ್ಷ ವಿಜಯಕುಮಾರ ಹಿರೇಮಠ, ಜಾನಕಿ ಚಿಕ್ಕನಗೌಡ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
Advertisement