ಆನೇಕಲ್:- ನಿಗೂಢವಾಗಿ ಕಾಂಕ್ರೀಟ್ ರಸ್ತೆ ಸ್ಪೋಟಗೊಂಡ ಪರಿಣಾಮ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಬನಹಳ್ಳಿ ಬಳಿ ರಸ್ತೆಯಲ್ಲಿ ಜರುಗಿದೆ.
Advertisement
ರಸ್ತೆಯ ಸಿಮೆಂಟ್, ಕಾಂಕ್ರೀಟ್ ಮತ್ತು ಜಲ್ಲಿ ಕಲ್ಲುಗಳು ಕಿತ್ತು ಬಂದಿದ್ದು, ಸುಮಾರು ನೂರು ಮೀಟರ್ ಎಸೆಯಲ್ಪಟ್ಟಿವೆ. ಸ್ಫೋಟದ ಜೊತೆ ಬೆಂಕಿ ಕಿಡಿ ಕೂಡ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಸ್ಫೋಟಕ್ಕೂ ಕೆಲ ಕ್ಷಣದ ಮೊದಲು ವಾಟರ್ ಟ್ಯಾಂಕರ್ ಒಂದು ಆ ರಸ್ತೆಯಲ್ಲಿ ಹಾದು ಹೋಗಿತ್ತು. ಟ್ಯಾಂಕರ್ ಮುಂದಕ್ಕೆ ಸಾಗುತ್ತಿದ್ದಂತೆಯೇ ಭಾರಿ ಶಬ್ದ ಮತ್ತು ಬೆಂಕಿ ಜೊತೆ ರಸ್ತೆ ಸ್ಫೋಟಗೊಂಡಿತು.
ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ರಸ್ತೆ ಮೇಲೆ ಹಾದುಹೋಗಿರುವ ಹೈವೋಲ್ಟೆಜ್ ವಿದ್ಯುತ್ ತಂತಿ ತೀರಾ ಕೆಳಗೆ ಜೋತು ಬಿದ್ದಿದೆ. ಅದರಿಂದಲೇ ಇಂತಹ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಸ್ಥಳೀಯರು ಆರೋಪಿಸಿದ್ದಾರೆ.