ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಶಾಲಾ, ಕಾಲೇಜು ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆ, ವಸತಿ ನಿಲಯಗಳಲ್ಲಿ ಮೂಲ ಸೌಲಭ್ಯ ಕಲ್ಪಿಸುವದು ಹಾಗೂ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆಯಿಂದ ವಿದ್ಯಾರ್ಥಿಗಳು ಪಟ್ಟಣದ ಬಸ್‌ನಿಲ್ದಾಣದ ಎದುರು ಸೇರಿ ಪ್ರತಿಭಟನೆ ನಡೆಸಿದರು.
ಈ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಭಿಷೇಕ ಉಮಚಗಿ, ತಾಲೂಕು ಸಂಚಾಲಕ ಪ್ರಕಾಶ ಕುಂಬಾರ ಮಾತನಾಡಿ, ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ವಸತಿ ನಿಲಯಗಳಿಗೆ ಸರಕಾರ ನೀಡುವ ಕಿಟ್‌ಗಳನ್ನು ತಕ್ಷಣ ನೀಡಬೇಕು. ನೂರೆಂಟು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾದು ಕುಳಿತರೂ ಕೊನೆಗೆ ಸರ್ಕಾರ ಇಲ್ಲ-ಸಲ್ಲದ ಸಬೂಬ ನೀಡಿ ವಿದ್ಯಾರ್ಥಿವೇತನ ಕಡಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ ವರ್ಷ ಬಾಕಿ ಇರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ತಕ್ಷಣ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು. ವಿದ್ಯಾಸಿರಿ ವೇತನ ಸರಿಯಾಗಿ ಜಮೆ ಆಗುತ್ತಿಲ್ಲ. ರೈತ ವಿದ್ಯಾನಿಧಿ ರದ್ದುಗೊಳಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ಧನಂಜಯ ಎಂ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಸಹ ಕಾರ್ಯದರ್ಶಿ ವಿನಯ್ ಸಪಡ್ಲ, ಯಶ್ವಂತ್ ಶಿರಹಟ್ಟಿ ಮನೋಜ್ ತಂಡಗೆರ, ವಿನಾಯಕ ಕುಂಬಾರ, ಅಭಿಷೇಕ್ ಈಸನಗೌಡರ, ವಿನಾಯಕ ಹುಂಬಿ, ಅರವಿಂದ ಇಚ್ಚಂಗಿ, ಯುವರಾಜ್ ದುರ್ಗದ, ಈರಣ್ಣ ಕುಂಬಾರ ಸಂಜನಾ, ರತ್ನಾ, ರಕ್ಷಿತಾ ಸವಿತಾ, ಅನುಪಮಾ, ಗೀತಾ, ತೇಜಸ್ವಿನಿ, ಅನುಷಾ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ಸಿಪಿಐ ನಾಗರಾಜ ಮಾಡಳ್ಳಿ, ಪಿಎಸ್‌ಐ ನಾಗರಾಜ ಗಡಾದ, ಕ್ರೈಂ ಪಿಎಸ್‌ಐ ಟಿ.ಕೆ. ರಾಠೋಡ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ನೀಡಿದ್ದರು.
**ಬಾಕ್ಸ್**
ಲಕ್ಷೆö್ಮÃಶ್ವರ ಬಸ್ ನಿಲ್ದಾಣದಿಂದ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಕಾಲೇಜಿಗೆ ಸರಿಯಾದ ಸಮಯಕ್ಕೆ ತಲುಪುಲಾಗುತ್ತಿಲ್ಲ. ಈ ಬಗ್ಗೆ ಹಲವು ಹಲವಾರು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಚಾಲಕರಿಗೆ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಶಬ್ದ ಬಳಸುತ್ತಾರೆ. ಅಂತಹ ಚಾಲಕರ ಮೇಲೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.