ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆಗೆ ಹೋದ ನಾಲ್ವರು ಗೋ ಭಕ್ತರನ್ನು ಗ್ರಾಮದ ಕೆಲವು ಮತಾಂಧ ಮುಸ್ಲಿಂ ಗೂಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗೋ ರಕ್ಷಕರ ಮೇಲಿನ ಹಲ್ಲೆ ನಾಚಿಕೆಗೇಡಿನ ಸಂಗತಿ. ತಕ್ಷಣವೇ ಆ ಮತಾಂಧರನ್ನು ಬಂಧಿಸಿ ಉಗ್ರ ಕ್ರಮ ಕೈಗೊಳ್ಳಬೇಕು. ಇಲ್ಲದ್ದಿದ್ದರೆ ಎಲ್ಲ ಹಿಂದೂ ಸಂಘಟನೆಗಳು ಹಾಗೂ ಗೋ ಭಕ್ತರು ಇಂಗಳಿ ಗ್ರಾಮಕ್ಕೆ ತೆರಳಿ ಜಿಹಾದಿಗಳಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿದ ಮುಖಂಡ ಈಶ್ವರ ಖಾಟವಾ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಜಿಹಾದಿಗಳ ಹಾವಳಿ ಹೆಚ್ಚಾಗಿದೆ. ಅವರಿಗೆ ಸರ್ಕಾರದ ಭಯ, ಪೊಲೀಸರ ಭಯ, ಕಾನೂನು ಭಯ ಇಲ್ಲದಂತಾಗಿದೆ. ನಾವು ಏನೇ ಮಾಡಿದರೂ ರಾಜ್ಯ ಸರ್ಕಾರ ನಮ್ಮನ್ನು ರಕ್ಷಿಸುತ್ತದೆ ಎನ್ನುವ ಮನೋಭಾವದಲ್ಲಿ ಬದುಕುತ್ತಿದ್ದಾರೆ. ಮುಂದಿನ ದಿನಮಾನಗಳಲ್ಲಿ ಇಂತಹ ಮತಾಂಧರಿಗೆ ನಾವೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.