HomeGadag Newsಉಪ್ಪಾರ ಕುಟುಂಬಗಳ ಮೇಲಿನ ಅನ್ಯಾಯ ಖಂಡನೆ: ಕಠಿಣ ಕ್ರಮಕ್ಕೆ ಆಗ್ರಹ

ಉಪ್ಪಾರ ಕುಟುಂಬಗಳ ಮೇಲಿನ ಅನ್ಯಾಯ ಖಂಡನೆ: ಕಠಿಣ ಕ್ರಮಕ್ಕೆ ಆಗ್ರಹ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉಪ್ಪಾರ ಸಮಾಜದ ಕುಟುಂಬಗಳಿಗೆ ಆಗಿರುವ ಅನ್ಯಾಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಮಹರ್ಷಿ ಭಗೀರಥ ಉಪ್ಪಾರ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಉಪ್ಪಾರ ಸಮಾಜದ ಕುಟುಂಬಗಳಿಗೆ ಆಗಿರುವ ಅನ್ಯಾಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಮಹರ್ಷಿ ಭಗೀರಥ ಉಪ್ಪಾರ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಉಪ್ಪಾರ ಸಮಾಜದ ಒಂದೇ ಕುಟುಂಬದ ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃತಪಟ್ಟಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಕುಟುಂಬದವರು ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಉಲ್ಲಾಸಗೌಡ ಎಂಬಾತನ ಕಿರುಕುಳ ಮತ್ತು ಕಿರುಕುಳದಿಂದ ಉಂಟಾದ ಮಾನಸಿಕ ವೇದನೆಯೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಿ, ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಇದೇ ವೇಳೆ, ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ಉಪ್ಪಾರಶೆಟ್ಟರ್ ಚಂದ್ರು ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ಖಂಡಿಸಿರುವ ಸಂಘದ ಮುಖಂಡರು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಆರೋಪಿಗಳಿಗೆ ನೀಡುವ ಶಿಕ್ಷೆ ಇಂತಹ ಘಟನೆಗಳು ಮರುಕಳಿಸದಂತೆ ಮಾದರಿಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಭೀಮನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜು ಗದ್ದಿ, ಉಪಾಧ್ಯಕ್ಷ ಹನಮಂತ ಗೊಟಗೊಂಡ, ಶಿವಪುತ್ರಪ್ಪ ಕುಂದ್ರಳ್ಳಿ, ಮಹಾದೇವಪ್ಪ ಪ್ಯಾಟಿ, ಸದಸ್ಯರಾದ ಪಾಂಡುರಂಗ ಕನಕಾಪೂರ, ಚನ್ನಪ್ಪ ಹಸರಂಬಿ, ಶಿವರಾಜ ಉಪ್ಪಾರ, ಹನುಮಂತ ತೆಂಗುಂಟಿ, ಸಂತೋಷ ಉಪ್ಪಾರ ಹಾಗೂ ಬಸವಣ್ಣೆಪ್ಪ ಉಪ್ಪಾರ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img