ಬೆಂಗಳೂರು:– ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸರಿ ಸುಮಾರು 70 ಕೋಟಿ ರೂ. ಹಣದ ವಹಿವಾಟು ಮಾಡಿದ್ದಾರೆ ಎಂದು ಆರೋಪಿಸಿ ಕಳೆದ 40 ದಿನದ ಹಿಂದೆ ಇಡಿ ಅಧಿಕಾರಿಗಳು ಐಶ್ವರ್ಯ ಮನೆಯ ಮೇಲೆ ದಾಳಿ ಮಾಡಿ, ಐಶ್ವರ್ಯಗೌಡಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪ್ರಕರಣ ಸಂಬಂಧ ಜಾಮೀನಿಗಾಗಿ CCH 1 ಇಡಿ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದ ಐಶ್ವರ್ಯಗೆ ಕೊನೆಗೂ ರಿಲೀಫ್ ಸಿಕ್ಕಿದೆ.
ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಕೆಲವೊಂದು ಷರತ್ತು ವಿಧಿಸಿದೆ. 5 ಲಕ್ಷ ಬಾಂಡ್, ಇಬ್ಬರು ಶ್ಯೂರಿಟಿ ಮತ್ತು ಮನೆಯ ವಿಳಾಸ ಬದಲು ಮಾಡದಂತೆ ಸೂಚನೆ ನೀಡಲಾಗಿದೆ.



