HomeKarnataka Newsಹನೂರು ಎನ್ ಕೌಂಟರ್ ಪ್ರಕರಣಕ್ಕೆ ಜುಡಿಷಿಯಲ್ ತನಿಖೆ ನಡೆಸಿ; ಸತ್ಯಾಸತ್ಯತೆ ಬಹಿರಂಗಪಡಿಸಿ - ಬಿ.ವೈ. ವಿಜಯೇಂದ್ರ

ಹನೂರು ಎನ್ ಕೌಂಟರ್ ಪ್ರಕರಣಕ್ಕೆ ಜುಡಿಷಿಯಲ್ ತನಿಖೆ ನಡೆಸಿ; ಸತ್ಯಾಸತ್ಯತೆ ಬಹಿರಂಗಪಡಿಸಿ – ಬಿ.ವೈ. ವಿಜಯೇಂದ್ರ

For Dai;y Updates Join Our whatsapp Group

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಬಳಿ ನಡೆದಿರುವ ಅರಣ್ಯ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಮಗ್ರ, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಘಟನೆ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇವಲ ಮ್ಯಾಜಿಸ್ಟ್ರೇಟ್ ತನಿಖೆಗೆ ಸೀಮಿತಗೊಳಿಸದೆ ಜುಡಿಷಿಯಲ್ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡು ಮುಖ್ಯಮಂತ್ರಿ ಹಾಗೂ ಆರ್ಚ್ ಬಿಷಪ್ ಅವರು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಪರಿಹಾರ ನೀಡುವಂತೆ ಮನವಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಈ ವಿಚಾರಕ್ಕೆ ಜಾತಿ ಅಥವಾ ಧರ್ಮದ ಬಣ್ಣ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಮೃತರು ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಮಾನವೀಯತೆಯೇ ಪರಿಹಾರ ಮತ್ತು ನ್ಯಾಯದ ಮಾನದಂಡವಾಗಬೇಕು ಎಂದು ಹೇಳಿದರು.

ಸದನದ ಆರಂಭದ ದಿನದಿಂದಲೂ ಬಿಜೆಪಿ ಮತ್ತು ಜೆಡಿಎಸ್ ಮೃತಪಟ್ಟ ಮೂವರು ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಹಾಗೂ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಒತ್ತಾಯಿಸುತ್ತಿವೆ ಎಂದ ಅವರು, ಅರಣ್ಯ ಸಚಿವರು ಸದನದಲ್ಲಿ ಪದೇಪದೇ ಮೃತರ ಧರ್ಮ ಉಲ್ಲೇಖಿಸುತ್ತಿರುವುದನ್ನು ಪ್ರಶ್ನಿಸಿದರು. ಪ್ರಕರಣವನ್ನು ಧರ್ಮದ ದೃಷ್ಟಿಕೋನದಿಂದ ಅಲ್ಲ, ಮಾನವೀಯ ದೃಷ್ಟಿಕೋನದಿಂದ ನೋಡಬೇಕು ಎಂದು ಒತ್ತಿ ಹೇಳಿದರು.

ಬೇಟೆಗೆ ಹೋಗಿದ್ದರು ಎಂಬ ಆರೋಪವಿದ್ದ ಮಾತ್ರಕ್ಕೆ ಎನ್‌ಕೌಂಟರ್ ಮಾಡಬಹುದೇ ಎಂದು ಪ್ರಶ್ನಿಸಿದ ವಿಜಯೇಂದ್ರ, ಅಧಿಕಾರಿಗಳ ಬಳಿ ಟಾರ್ಚ್ ಇತ್ತು, ಪರಿಸ್ಥಿತಿ ನಿಯಂತ್ರಿಸಲು ಬೇರೆ ಕಾನೂನುಬದ್ಧ ಮಾರ್ಗಗಳಿರಲಿಲ್ಲವೇ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದರು. ಅರಣ್ಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದ್ದಾರೆಯೇ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪತ್ತೆಹಚ್ಚಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೊಡಗು, ಮಡಿಕೇರಿ, ಶಿವಮೊಗ್ಗ, ಮಲೆನಾಡು, ಉತ್ತರ ಕನ್ನಡ ಹಾಗೂ ಕರಾವಳಿ ಭಾಗಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಗಂಭೀರ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಹನೂರು ಘಟನೆಯ ಸಂಪೂರ್ಣ ಸತ್ಯ ಹೊರಬರುವುದು ಅಗತ್ಯ ಎಂದ ಅವರು, ಯಾವ ಸರ್ಕಾರದ ಅವಧಿಯಲ್ಲಿ ಘಟನೆ ನಡೆದಿದೆ ಎಂಬುದು ಮುಖ್ಯವಲ್ಲ, ಹಿಂದಿನ ಘಟನೆಗಳನ್ನು ಮುಂದಿಟ್ಟುಕೊಂಡು ಈಗಿನ ಪ್ರಕರಣದ ಹೊಣೆಗಾರಿಕೆಯಿಂದ ಸರ್ಕಾರ ನುಣುಚಿಕೊಳ್ಳಬಾರದು ಎಂದು ಹೇಳಿದರು.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕಚೇರಿ ಮೇಲೆ ನಡೆದ ದಾಳಿಯನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದ ವಿಜಯೇಂದ್ರ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬದಿಂದ ಅಭ್ಯರ್ಥಿಗಳಿಗೆ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿದರು. ಯುವಕರ ಭವಿಷ್ಯದ ಜೊತೆ ಆಟವಾಡುವ ವ್ಯವಸ್ಥೆಗೆ ಕಡಿವಾಣ ಹಾಕುವುದು ಸರ್ಕಾರದ ಕರ್ತವ್ಯ ಎಂದ ಅವರು,

ಯಾವ ಸರ್ಕಾರ ಕೆಪಿಎಸ್‌ಸಿ ಅಧ್ಯಕ್ಷರು ಅಥವಾ ಸದಸ್ಯರನ್ನು ನೇಮಕ ಮಾಡಿತ್ತು ಎಂಬುದು ಮುಖ್ಯವಲ್ಲ, ಅಕ್ರಮ ನಡೆದಿದ್ದರೆ ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಪ್ರತಿಪಾದಿಸಿದರು. ಕೆಪಿಎಸ್‌ಸಿ ಅಕ್ರಮಗಳ ಕುರಿತು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img