HomeGadag Newsಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಜರುಗಿಸಿ

ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಜರುಗಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳು ಎಪ್ರಿಲ್ 24ರಿಂದ ಮೇ 8ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಎಪ್ರಿಲ್ 24ರಿಂದ ಮೇ 8ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಈ ಪತ್ರಿಬಂಧಕಾಜ್ಞೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಸೂಕ್ತ ಬಂದೋಬಸ್ತ್ ಒದಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು/ತೆಗೆದುಕೊಂಡು ಹೋಗುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸೈಡ್ ರೂಲ್ಸ್, ಕ್ಯಾಲ್‌ಕ್ಯುಲೇಟರ್, ವೈಟ್ ಪ್ಲುಯಿಡ್, ವೈರ್‌ಲೆಸ್ ಸೆಟ್ಸ್, ಪೇಪರ್ ಚೀಟಿ, ಪುಸ್ತಕ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮಾತನಾಡಿ, ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗಳನ್ನು ಯಾವುದೇ ಅಕ್ರಮಕ್ಕೆ ಆಸ್ಪದ ನೀಡದೇ ಪಾರದರ್ಶಕವಾಗಿ ಜರುಗಿಸಬೇಕೆಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ ಮಾತನಾಡಿ, ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಸುಗಮವಾಗಿ ಜರುಗಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸ್ವಚ್ಛತೆ, ಸಿ.ಸಿ ಟಿವಿ ಅಳವಡಿಕೆ, ಸೂಕ್ತ ಬಂದೋಬಸ್ತ್ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಡಯಟ್ ಪ್ರಾಂಶುಪಾಲರಾದ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಅವ್ಯವಹಾರ, ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಶಿಸ್ತು ಮತ್ತು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!