ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಇಂದು

0
samavesha
Spread the love

ವಿಜಯಸಾಕ್ಷಿ ಸುದ್ದಿ, ರೋಣ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಜೊತೆಗೆ 129 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಮಾ.೨ರಂದು ತಾಲೂಕಾ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದು ಶಾಸಕ ಹಾಗೂ ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಜಿ.ಎಸ್. ಪಾಟೀಲ ಹೇಳಿದರು.

Advertisement

ಅವರು ಶನಿವಾರ ಆರ್.ಎಸ್. ಪಾಟೀಲ ಜಿನ್ನಿಂಗ್ ಕಂಪನಿಯಲ್ಲಿ ಸುದ್ದಿಗೋಷ್ಠಿಯನ್ನುದೇಶಿಸಿ ಮಾತನಾಡಿದರು.
ಈಗಾಗಲೇ ರೋಣ ಮತಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಫಲಾನುಭವಿಗಳ ಸಮಾವೇಶದಂದು ರೋಣ-ಗಜೇಂದ್ರಗಡ ರಸ್ತೆಯ ಇಟಗಿ ಕ್ರಾಸ್ ಬಳಿ 120 ಕೋಟಿ ರೂ. ವೆಚ್ಚದಲ್ಲಿ 220/110 ಕೆ.ವ್ಹಿ.ನೂತನ ವಿದ್ಯುತ್ ವಿತರಣಾ ಕೇಂದ್ರದ ಶಂಕುಸ್ಥಾಪನೆ, ರೋಣ, ನರೆಗಲ್ಲ, ಗಜೇಂದ್ರಗಡ ಪಟ್ಟಣಗಳಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ, ಗಜೇಂದ್ರಗಡ ಇಂಗುಕರೆಯನ್ನು ಪ್ರವಾಸಿ ತಾಣವನ್ನಾಗಿಸಲು 6 ಕೋಟಿ ರೂ ವೆಚ್ಚದಲ್ಲಿ ಸಾಲುಮರ ತಿಮ್ಮಕ್ಕ ಸಸ್ಯೋದ್ಯಾನವನ್ನು ನಿರ್ಮಿಸಲಾಗುವುದು. ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಎರಡೂ ತಾಲೂಕುಗಳಿಂದ 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.

ದಶರಥ ಗಾಣಿಗೇರ, ಪರಶುರಾಮ ಅಳಗವಾಡಿ, ವಿ.ಬಿ. ಸೋಮನಕಟ್ಟಿಮಠ, ಯೂಸುಪ್ ಇಟಗಿ, ಬಸವರಾಜ ನವಲಗುಂದ, ಶಫೀಕ ಮೂಗನೂರ, ಸಂಗು ನವಲಗುಂದ, ಆನಂದ ಚಂಗಳಿ, ದಾವಲಸಾಬ ಬಾಡಿನ, ಅಸ್ಲಂ ಕೊಪ್ಪಳ, ಮಲ್ಲು ರಾಯನಗೌಡ್ರ, ಸಂಜಯ ದೊಡ್ಡಮನಿ, ಗದಿಗೇಪ್ಪ ಕೊರೇಸೂರ ಸೇರಿದಂತೆ ಪುರಸಭೆಯ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿ ನುಡಿದಂತೆ ನಡೆದಿದ್ದೇವೆ. ಅಲ್ಲದೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದು, ಫಲಾನುಭವಿಗಳ ಸಮಾವೇಶಕ್ಕೆ ಸಾಕ್ಷಿಯಾಗಿದೆ ಎಂದು ಜಿ.ಎಸ್. ಪಾಟೀಲ ನುಡಿದರು.


Spread the love

LEAVE A REPLY

Please enter your comment!
Please enter your name here