ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಧೀಶರಾಗಿ ಅಧಿಕಾರ ವಹಿಸಿಕೊಂಡ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಅಧಿಕಾರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾನೂನು, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಪಾಲ್ಗೊಂಡರು.
Advertisement
ಪ್ರಮಾಣವಚನ ಬೋಧಿಸಲು ಆಗಮಿಸಿದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು. ನೂತನ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರನ್ನು ಅಭಿನಂದಿಸಿ, ಶುಭಕಾಮನೆಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.