ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯ ಫಲಿತಾಂಶ ಹೊರಬೀಳಲಿದೆ.. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿರುವ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಅವರು ಇದೀಗ ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.
Advertisement
ಹೌದು ಅಂಚೆ ಮತ ಎಣಿಕೆಯಿಂದ ಇವಿಎಂ ಮತ ಎಣಿಕೆಯ ಮೂರು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಮಧ್ಯದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ಇದೀಗ 16 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಅವರು 83368 ಹಾಗೂ ಬಿಜೆಪಿ ಬಂಗಾರಿ ಹನುಮಂತ 74487 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಬಾಕಿಯಿದೆ.