ಮೈಸೂರು: ಕಾಂಗ್ರೆಸ್’ನವರಿಗೆ ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿಯಿಲ್ಲ,
ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಲು ಸಾಧ್ಯವಿಲ್ಲ. ಇಲ್ಲದಿದ್ದರೆ ಇಂತಹ ಪರಿಸ್ಥಿತಿಯಲ್ಲಿ ಮೇಕೆದಾಟು ಯೋಜನೆ ಕಾಂಗ್ರೆಸ್ನಿಂದ ಜಾರಿಯಾಗಲು ಸಾಧ್ಯವಿಲ್ಲ ಎಂದರು.
ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಜಾರಿ ಮಾಡಲು ಕಚೇರಿ ತೆರೆದರೆ ಏನೂ ಪ್ರಯೋಜನವಿಲ್ಲ. ಈಗ ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ನವರು. ಜಾರಿ ಮಾಡದೆ ಎರಡು ವರ್ಷದಿಂದ ಸುಮ್ಮನಿದ್ದು,
ಈಗ ನನ್ನ ಮೇಲೆ ಜವಾಬ್ಧಾರಿ ಹೊರಿಸುತ್ತಿದ್ದಾರೆ. ನಾನು ಹೇಗೆ ಮಾಡಲಿ. ಮೊದಲು ತಮ್ಮ ತಮಿಳುನಾಡಿನ ಮಿತ್ರಪಕ್ಷ ಒಪ್ಪಿಸಲಿ. ಐದೇ ನಿಮಿಷದಲ್ಲಿ ಪ್ರಧಾನ ಮಂತ್ರಿಗಳಿಂದ ಮೇಕೆದಾಟು ಯೋಜನೆಗೆ ನಾನು ಒಪ್ಪಿಗೆ ಕೊಡಿಸುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.