ಹಾಸನ: ಕಾಂಗ್ರೆಸ್ʼನವರ ಅಪ್ಪನ ಮನೆಯಿಂದ ಪೊಲೀಸರಿಗೆ ಸಂಬಳ ಕೊಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಮುಸ್ಲಿಂಮರು ಕೊಟ್ಟ ಭಿಕ್ಷೆಯಲ್ಲಿ ಬದುಕುತ್ತಿದ್ದಾರೆ. ಇದೀಗ ಅವರು ಭಿಕ್ಷೆ ಕೊಟ್ಟವರ ಋಣ ತೀರಿಸಲು ನಿಂತಿದ್ದಾರೆ.
ಅವನ್ಯಾವನೋ ಕಳ್ಳ ಯಾವ ರೀತಿ ಭಾಷಣ ಮಾಡಿದ್ದಾನೆ. ಬೆಂಕಿ ಹಚ್ಚಲು ಏನೇನು ಹೇಳಬೇಕು ಅಷ್ಟು ಹೇಳಿದ್ದಾರೆ. ಅವನನ್ನು ಇದುವರೆಗೂ ಬಂಧಿಸಿಲ್ಲ. ಎಲ್ಲಾ ಮಂತ್ರಿಗಳು ಪೊಲೀಸರಿಗೆ ಥೂ ಅನ್ನುವ ಪದ ಬಳಸುತ್ತಾರೆ. ಕಾಂಗ್ರೆಸ್‌ನವರ ಅಪ್ಪನ ಮನೆಯಿಂದ ಪೊಲೀಸರಿಗೆ ಸಂಬಳ ಕೊಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.



