ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ ಎಂದರು.
Advertisement
ಇನ್ನೂ ತಿಯೊಂದು ವಿಷಯದಲ್ಲೂ ಅನಗತ್ಯ ಮೂಗು ತೂರಿಸಿ ತಮ್ಮ ನಡೆ, ನುಡಿಗಳಲ್ಲಿ ದಾಷ್ಟ್ಯತನ ಪ್ರದರ್ಶಿಸುವ ಸಚಿವ ಪ್ರಿಯಾಂಕ್ ಖರ್ಗೆ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂಬುದು ಆತ್ಮಹತ್ಯೆಗೊಳಗಾದ ದುರ್ದೈವಿ ಗುತ್ತಿಗೆದಾರ ಸಚಿನ್ ಬರೆದಿರುವ ಪತ್ರದಲ್ಲಿ ಸ್ಪಷ್ಟವಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಲಿ ಎಂದು ಬಿವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.