ಬೆಂಗಳೂರು: ಕಮಿಷನ್ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಮಿಷನ್ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನೇ ಕತ್ತಲೆಗೆ ದೂಡುತ್ತಿದೆ.
Advertisement
ಹಿಟ್ನಾಳ್ ಹೇಳಿದರು, ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಎಂದು. ವೋಟ್ ಹಾಕುವಾಗಲೂ ಅಡ್ಜಸ್ಟ್ ಮಾಡ್ಕೊಳ್ಳಿ ಅಂತ ಹೇಳಬೇಕಿತ್ತು ಎಂದು ಟೀಕಿಸಿದ್ದಾರೆ. ಇನ್ನೂ ಡಾ.ಬಿ.ಆರ್.ಅಂಬೇಡ್ಕರ್ ಸ್ವಯಂ ಉದ್ಯೋಗ ಯೋಜನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಕೊಟ್ಟಿದ್ದೆವು.
ಕಾಂಗ್ರೆಸ್ ಅದನ್ನ 45 ಕೋಟಿ ರೂ.ಗೆ ಇಳಿಸಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ನಾವು ಕೊಟ್ಟಿದ್ದು 100 ಕೋಟಿ ರೂ., ಅವರು ಕೊಟ್ಟಿದ್ದು 40 ಕೋಟಿ ರೂ. ದಲಿತರ ಬಗ್ಗೆ ಇರುವ ಪ್ರೀತಿ ಇದುವೆಯಾ ಸಿದ್ದರಾಮಯ್ಯನವರೇ ಎಂದು ಅಶೋಕ್ ಪ್ರಶ್ನಿಸಿದರು.