ಬೆಂಗಳೂರು- ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
Advertisement
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ. ಆದರೆ, ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದರು.
ಗ್ಯಾರಂಟಿಗಳನ್ನು ಘೋಷಿಸಿದ್ದೀರಿ. ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಊರ್ಜಿತ ಆಗುವುದಿಲ್ಲ ಎಂಬುದು ಅವರಿಗೂ ಗೊತ್ತಿದೆ. ಒಂದು ಕಡೆ ಕೊಟ್ಟಂತಿರಬೇಕು. ಆದರೆ, ಅದು ಕೈ ಸೇರಬಾರದು. ಇದು ನಿಮ್ಮ ದುರುದ್ದೇಶ ಎಂದು ಟೀಕಿಸಿದರು.