ಬಿಹಾರ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

0
Spread the love

ತುಮಕೂರು:- ಬಿಹಾರ ಚುನಾವಣೆ ಬಳಿಕ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನವೆಂಬರ್ 14ಕ್ಕೆ ಬಿಹಾರ ಚುನಾವಣೆ ನಡೆಯುತ್ತದೆ. ಫಲಿತಾಂಶ ಬಂದ ನಂತರ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯ ಸುತ್ತಾಡಿ, ಫಂಡಿಂಗ್ ಮಾಡಿ 138 ಸ್ಥಾನ ಗಳಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ವಾಡಿಕೆಯಂತೆ ಅವರೇ ಸಿಎಂ ಆಗಬೇಕಿತ್ತು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು.

ಡಿಕೆಶಿ ಅವರ ತಾಖತ್‌ನಿಂದ ಫಂಡ್ ಮೊಬಿಲೈಜ್ ಮಾಡಿರೋದ್ರಿಂದ, ಪರಿಶ್ರಮ ಹಾಕಿರೋದ್ರಿಂದ ಸರ್ಕಾರ ಬಂದಿದೆ. ಆದರೆ ಸಿದ್ದರಾಮಯ್ಯ ಸಿಎಂ ಆದರು. ಸಿದ್ದರಾಮಯ್ಯ ಏನಾದರೂ ಫಂಡಿಂಗ್ ಮಾಡಿದ್ರಾ? ಹಣ ಕೊಟ್ಟರ‍್ಯಾರು ಡಿಕೆಶಿ ಅಲ್ಲವೇ? ಡಿಕೆ ಶಿವಕುಮಾರ್ ಪರಿಶ್ರಮಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಈಗಲೂ ಸಿದ್ದರಾಮಯ್ಯ ಡಿಕೆಶಿಯನ್ನು ಸಿಎಂ ಮಾಡಬಾರದು ಎಂದು ತಂತ್ರ ರೂಪಿಸುತಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ತಾನು ನೂರಕ್ಕೆ ನೂರು ಸಿಎಂ ಆಗುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದರು.

ಆಗಾಗ ಕೊಕ್ಕೆ ಹಾಕುವ ಸಿದ್ದರಾಮಯ್ಯ, ಜಿ ಪರಮೇಶ್ವರ್, ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ.ಪಾಟೀಲ್‌ಗೆ ನೀವುಗಳೇ ಸಿಎಂ ಆಗಿ ಎಂದು ಎತ್ತಿಕಟ್ಟುತ್ತಿದ್ದಾರೆ. ಸಿದ್ದರಾಮಯ್ಯರ ಎಲ್ಲಾ ಸ್ಟ್ರಾಟಜಿ ಡಿ.ಕೆ.ಶಿವಕುಮಾರ್‌ಗೆ ಗೊತ್ತಾಗಿದೆ. ಇಬ್ಬರು ಮೇಲ್ನೋಟಕ್ಕೆ ಚೆನ್ನಾಗಿದ್ದವರಂತೆ ಕಾಣುತ್ತಾರೆ. ಆದರೆ ಸಿದ್ದರಾಮಯ್ಯ ಡಿಕೆಶಿಯನ್ನು ಗೋಡೆಗೆ ತಳ್ಳಿ ಬಕಾ, ಬಕಾ ಎಂದು ದಿನಕ್ಕೊಬ್ಬರನ್ನು ಬಿಟ್ಟು ಬಾಕ್ಸಿಂಗ್ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಮಾತ್ರ ದೇವರ ಥರ ನಿಂತುಕೊಂಡಿದ್ದಾರೆ. ಏನೇ ಇದ್ದರೂ ನವೆಂಬರ್ 14ರ ಬಳಿಕ ಈ ಸರ್ಕಾರ ಪತನ ಆಗೋದು ಗ್ಯಾರಂಟಿ ಎಂದು ಹೇಳಿಕೆ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here