HomeKarnataka Newsಕಾಂಗ್ರೆಸ್ ಸರ್ಕಾರದ ‘ಸಾಧನಾ ಸಮಾವೇಶ’ ಶೂನ್ಯ ಸಾಧನೆ: ಬಸವರಾಜ ಬೊಮ್ಮಾಯಿ ಟೀಕೆ

ಕಾಂಗ್ರೆಸ್ ಸರ್ಕಾರದ ‘ಸಾಧನಾ ಸಮಾವೇಶ’ ಶೂನ್ಯ ಸಾಧನೆ: ಬಸವರಾಜ ಬೊಮ್ಮಾಯಿ ಟೀಕೆ

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕ ಸರ್ಕಾರ 1,000 ದಿನಗಳನ್ನು ಪೂರೈಸಿದ ಹಿನ್ನೆಲೆ ಹಾವೇರಿಯಲ್ಲಿ ಕಾಂಗ್ರೆಸ್ ವತಿಯಿಂದ ‘ಸಾಧನಾ ಸಮಾವೇಶ’ ಆಯೋಜಿಸಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಾವೇಶವನ್ನು ‘ಶೂನ್ಯ ಸಾಧನೆಯ ಸಮಾವೇಶ’ ಎಂದು ಟೀಕಿಸಿದರು.

“ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದೆ. ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನಿನಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ,” ಎಂದು ಹೇಳಿದರು.

ಬಿಜೆಪಿ ಸರ್ಕಾರದ ಅವಧಿಯನ್ನು ಉಲ್ಲೇಖಿಸಿದ ಬೊಮ್ಮಾಯಿ, “ನಮ್ಮ ಸರ್ಕಾರ ಆಡಳಿತದಲ್ಲಿದ್ದಾಗ ಅಕ್ರಮ ಆಸ್ತಿಗಳನ್ನು ಸಕ್ರಮಗೊಳಿಸಿ, ಅದರ ಮೂಲಕ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಆದರೆ ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಖಜಾನೆ ಬರಿದಾಗಿರುವುದರಿಂದ ಸಬ್‌ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ಮೇಲೆ ಹೇರಲಾಗಿದೆ. ಒಬ್ಬ ಬಡವ 3-4 ಲಕ್ಷ ರೂ. ಕಟ್ಟುವ ಪರಿಸ್ಥಿತಿ ಬಂದಿದೆ,” ಎಂದು ಆರೋಪಿಸಿದರು.

ಇನ್ನಷ್ಟು ಆರೋಪಗಳನ್ನು ಮಾಡಿರುವ ಅವರು, “ಈ ವ್ಯವಸ್ಥೆ ಜಾರಿಗೆ ತರುವ ವೇಳೆ ಕಂದಾಯ ಇಲಾಖೆಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಸಾಧನೆಯ ಸಮಾವೇಶವಲ್ಲ, ಭ್ರಷ್ಟಾಚಾರದ ಸಾಧನೆಯ ಸಮಾವೇಶ. ಬಡವರ ಮೇಲೆ ಆರ್ಥಿಕ ಭಾರ ಹೇರುವ ಕೆಲಸ ಈ ಸರ್ಕಾರ ಮಾಡುತ್ತಿದೆ,” ಎಂದು ವಾಗ್ದಾಳಿ ನಡೆಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!