ಬೆಂಗಳೂರು: ವೃಥಾ ಆರೋಪ ಮಾಡುವ ಕಾಂಗ್ರೆಸ್ ಮೂರ್ಖರ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪಗಳನ್ನು ಮಾಡುತ್ತಿದ್ದಾರೆ, ವೃಥಾ ಆರೋಪ ಮಾಡುವ ಕಾಂಗ್ರೆಸ್ ಮೂರ್ಖರ ಪಕ್ಷವಾಗಿ ಮಾರ್ಪಟ್ಟಿದೆ.
ಇದು ಅವರು ಮತದಾರರಿಗೆ ಮಾಡುವ ಅಪಮಾನ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಹೇಳುವ ರಾಹುಲ್ ಗಾಂಧಿ ಬಿಹಾರದಲ್ಲಿ ನಡೆಯುತ್ತಿರುವ ಸ್ಪೆಷಲ್ ಇಂಟೆನ್ಸಿವ್ ರಿವಿಜನ್ ಅನ್ನು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಕೆಲವು ಕಾಂಗ್ರೆಸ್ ಮುಖಂಡರು ಕೊಟ್ಟಿರುವುದನ್ನೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಎಂದುಕೊಂಡಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ.
ನಿನ್ನೆ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಕರ್ನಾಟಕದಲ್ಲಿ ಸಹ ಬಹಳಷ್ಟು ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ನಕಲಿ ಮತದಾರರು ಸೇರಿದ್ದಾರೆ ಅಂತ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ನಂತರ ಕಾಂಗ್ರೆಸ್ ಹಿರಿಯ ನಾಯಕರು ಮೂರ್ಖರಂತೆ ಪ್ರಧಾನಿ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು.