ಮುಂಬೈ: ಅಭಿವೃದ್ಧಿ ಕಾರ್ಯಗಳಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್ ಡಬಲ್ PHD ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಚಂದ್ರಾಪುರದ ಜನರು ರೈಲು ಸಂಪರ್ಕಕ್ಕೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್ ಮತ್ತು ಅಘಾಡಿ ಅದಕ್ಕೆ ಅವಕಾಶ ನೀಡಲಿಲ್ಲ. ಮಹಾರಾಷ್ಟ್ರದ ಕ್ಷಿಪ್ರ ಅಭಿವೃದ್ಧಿಯು ಅಘಾಡಿಗೆ ಸಾಧ್ಯವಿಲ್ಲ. ಅವರು ಅಭಿವೃದ್ಧಿ ಕಾರ್ಯಗಳಿಗೆ ಬ್ರೇಕ್ ಹಾಕುವಲ್ಲಿ ಪಿಹೆಚ್‌ಡಿ ಮಾಡಿದ್ದಾರೆ. ಕಾಂಗ್ರೆಸ್ ಅದರಲ್ಲಿ ಡಬಲ್ ಪಿಹೆಚ್‌ಡಿ ಮಾಡಿದೆ. ಅವರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ, ದೇಶವನ್ನು ಆಳಲು ಹುಟ್ಟಿದೆ ಎಂಬುದು ಕಾಂಗ್ರೆಸ್‌ನ ಮನಸ್ಥಿತಿಯಾಗಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಹಿಂದುಳಿದ ಸಮುದಾಯಗಳ ಪ್ರಗತಿಗೆ ಅದು ಅಡ್ಡಿಪಡಿಸಿದೆ. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳು ಪ್ರಗತಿ ಸಾಧಿಸಲು ಕಾಂಗ್ರೆಸ್ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.