ಬೆಂಗಳೂರು: ಈ ದೇಶದಲ್ಲಿ ಸಂವಿಧಾನವನ್ನು ಅಪಮಾನ ಮಾಡಿರುವುದು ಕಾಂಗ್ರೆಸ್ ಎಂದು ಜೆಡಿಎಸ್ ಎಸ್‌ಸಿ ಘಟಕದ ಅಧ್ಯಕ್ಷ ಮಾಜಿ ಶಾಸಕ ಅನ್ನದಾನಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್. ಅಂಬೇಡ್ಕರ್ ಸಂವಿಧಾನ ತಿದ್ದುಪಡಿ ಮಾಡಿದ್ದು ಈ ನೀಚ ಕಾಂಗ್ರೆಸ್.
ಈ ದೇಶದಲ್ಲಿ ಸಂವಿಧಾನವನ್ನು ಅಪಮಾನ ಮಾಡಿರುವುದು ಕಾಂಗ್ರೆಸ್. ದೇವೇಗೌಡರನ್ನ, ಅಡ್ವಾಣಿ, ಜೆಪಿ ಅವರನ್ನ ಜೈಲಿಗೆ ಹಾಕಿದ್ದೀರಿ. ಅಂಬೇಡ್ಕರ್ ಸಂವಿಧಾನ ಅಮಾನತು ಮಾಡಿ, ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದರು. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.
ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದ್ದಾರೆ. ಡಿಕೆಶಿ ಡಿಸಿಎಂ ಆಗಿದ್ದರೆ ಸಂವಿಧಾನದಿಂದ ಬೇರೆಯವರನ್ನ ಒಲೈಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ನೀವು ಯಾರಿಗಾದರೂ ಮೀಸಲಾತಿ ಕೊಡಿ ನಮ್ಮ ಅಭ್ಯಂತರ ಇಲ್ಲ. ಆದರೆ ಸಂವಿಧಾನ ಬದಲಾವಣೆ ಮಾಡುವ ಮಾತು ಆಡಬೇಡಿ. ನಾನು ಮಾತಾಡಿಲ್ಲ ಎಂದು ಹೇಳಿದ್ದೀರಾ. ನೀವು ಹೇಳಿದ್ದೀರಾ ಎಂದು ವಾಗ್ದಾಳಿ ನಡೆಸಿದರು.