HomePolitics Newsಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಶ್ರಮಿಸಿದೆ:ಆನಂದಸ್ವಾಮಿ

ಕಾಂಗ್ರೆಸ್ ದೇಶದ ಅಭಿವೃದ್ಧಿಗೆ ಶ್ರಮಿಸಿದೆ:ಆನಂದಸ್ವಾಮಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಅಪಹಾಸ್ಯ ಮಾಡುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಅವರು ಸೋಮವಾರ ಶಿರಹಟ್ಟಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ನಿಮಿತ್ತ ಪ್ರಮುಖ ಬೀದಿಗಳಲ್ಲಿ ರೋಡ್‌ಶೋ ನಡೆಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ದೇಶದ ಅಭಿವೃದ್ಧಿಗೆ ಶ್ರಮಿಸಿದೆ. ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿ ಎಲ್ಲ ವರ್ಗದವರ ಹಿತವನ್ನು ಕಾಪಾಡುತ್ತಾ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ಆದ್ದರಿಂದ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಸಹಕರಿಸಿ ಎಂದರು.

ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಗುರುನಾಥ ದಾನಪ್ಪನವರ, ಸುಜಾತಾ ದೊಡ್ಡಮನಿ ಮಾತನಾಡಿದರು.

ಬ್ಲಾಕ್ ಅಧ್ಯಕ್ಷ ಹುಮಾಯೂನ್ ಮಾಗಡಿ, ದೇವಪ್ಪ ಲಮಾಣಿ, ಡಿ.ಕೆ. ಹೊನ್ನಪ್ಪನವರ, ಮೈಲಾರೆಪ್ಪ ಹಾದಿಮನಿ, ಶಿವನಗೌಡ ಪಾಟೀಲ, ಚನ್ನಪ್ಪ ಜಗಲಿ, ವಿ.ಪಿ. ಮಠಪತಿ, ಪರಮೇಶ ಪರಬ, ರಾಜಣ್ಣ ಕುಂಬಿ, ಬುಡನಶ್ಯಾ ಮಕಾನದಾರ, ಹೊನ್ನಪ್ಪ ಶಿರಹಟ್ಟಿ, ಅಶ್ರತಅಲಿ ಢಾಲಾಯತ, ಎಂ.ಸಿ. ಹಿರೇಮಠ, ಮುತ್ತುರಾಜ ಭಾವಿಮನಿ, ಮಹಾಂತೇಶ ದಶಮನಿ, ಅಜ್ಜು ಪಾಟೀಲ, ಜಗದೀಶ ಗಾಂಜಿ, ಮಾಬುಸಾಬ ಲಕ್ಷ್ಮೇಶ್ವರ, ವಿರುಪಾಕ್ಷಪ್ಪ ನಂದೆಣ್ಣವರ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img