ಕೋಲಾರ;-ಪಾಕಿಸ್ತಾನದ ಏಜೆಂಟ್ ನವರಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಎಸ್ ಮುನಿಸ್ವಾಮಿ ಹೇಳಿದ್ದಾರೆ.ನಗರದ ಹೊಸ ಬಸ್ ನಿಲ್ದಾಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆಯನ್ನು ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. 5 ರಾಜ್ಯಗಳಲ್ಲಿ ನಡೆಯುತ್ತಿರುವಂತಹ ಚುನಾವಣೆಗೆ ಹಣ ಕೊಡಡುವುದಕ್ಕೆ ಈ ಕಮಿಷನ್ ಮಾಡಲಾಗುತ್ತಿದೆ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ೧೦೦ ಕೋಟಿ ಹಣ ಸಿಕ್ಕಿದೆ ಇದಕ್ಕೆ ಮಾನ್ಯ ಮುಖ್ಯ ಮಂತ್ರಿಗಳು ಸಿದ್ದರಾಮಯ್ಯ ಡಿಕೆಶಿವಕುಮಾರ್ ರಾಜೀನಾಮೆ ಕೊಟ್ಟು ಈ ರಾಜ್ಯದ ಜನತೆಯನ್ನು ಕ್ಷಮೆ ಕೇಳಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರೈತರನ್ನು ಒಕ್ಕಲೆಬಿಸುವ ಕೆಲಸ ಮಾಡುತ್ತಿದ್ದಾರೆ ಕಾಂಗ್ರೆಸ್ ನವರು ಪಾಕಿಸ್ತಾನ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಈ ಸರ್ಕಾರ ತುಂಬ ದಿನ ಉಳಿಯುವುದಿಲ್ಲ ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ ಸರ್ಕಾರ ಕೋಮುಗಲಭೆಗಳನ್ನು ಸೃಷ್ಟಿ ಮಾಡುತ್ತಿರುವ ಸರ್ಕಾರ ಕೂಡಲೇ ಸಿಎಂ ಮತ್ತು ಡಿಕೆಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಹೇಳಿದರು.