2 ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ: ಜಿ. ಪರಮೇಶ್ವರ್‌

0
Spread the love

ಬೆಂಗಳೂರು: ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎರಡು ರಾಜ್ಯಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ.

Advertisement

ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ಹಾಗೂ ಹರಿಯಾಣದಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಸರ್ವೆಯಲ್ಲೂ ಕನಿಷ್ಠ 50 ಕ್ಷೇತ್ರಗಳಲ್ಲಿ ಗೆಲುವಿನ ವರದಿ ಬಂದಿದೆ. ಇದರಿಂದ ದೇಶದಲ್ಲಿ ಬದಲಾವಣೆ ಪ್ರಾರಂಭವಾಗಿದೆ ಎನ್ನಬಹುದು ಎಂದು ತಿಳಿಸಿದ್ದಾರೆ.

ದೀರ್ಘವಾಗಿ ಚರ್ಚೆ ಮಾಡಿ, ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡಿ ಈ ಗ್ಯಾರಂಟಿಗಳನ್ನು ತಗೊಂಡು ಬಂದಿದ್ದೇವೆ. ಪ್ರಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟೀಕೆ ಮಾಡಿದ್ರು, ರಾಜ್ಯದಲ್ಲಿ ಜೆಡಿಎಸ್ ನಾಯಕರು ಕೂಡ ಟೀಕೆ ಮಾಡಿದ್ರು. ಯಾವ ಪಕ್ಷ ಜನರಿಗೆ ಸಹಾಯ ಮಾಡುತ್ತದೋ ಅವರ ಪರವಾಗಿ ಜನರು ನಿಲ್ತಾರೆ, ನಾವು ಕೂಡ ಇದನ್ನೇ ಮಾಡಬೇಕು ಅಂತಾ ಈಗ ಅವರಿಗೆ ಅರ್ಥ ಆಗಿದೆ ಎಂದು ತಿರುಗೇಟು ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here