HomePolitics Newsರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ: ಹೆಚ್ ಡಿ ಕುಮಾರಸ್ವಾಮಿ ಆರೋಪ

ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ: ಹೆಚ್ ಡಿ ಕುಮಾರಸ್ವಾಮಿ ಆರೋಪ

For Dai;y Updates Join Our whatsapp Group

Spread the love

ಬೆಂಗಳೂರು: ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್​ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ. ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!