ಬೆಂಗಳೂರು: ಹಿಟ್ ಆಂಡ್ ರನ್ ರೀತಿಯಲ್ಲಿ ಆರೋಪ ಮಾಡುವುದು ಕಾಂಗ್ರೆಸ್ ಜಾಯಮಾನ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಟ್ ಆಂಡ್ ರನ್ ರೀತಿಯಲ್ಲಿ ಆರೋಪ ಮಾಡುವುದು ಕಾಂಗ್ರೆಸ್ ಜಾಯಮಾನ. ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲೇ ಈ ಬಗ್ಗೆ ಮಾತನಾಡಬೇಕಿತ್ತು.
ದಾಖಲೆ ಇಲ್ಲವಾದಾಗ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಾರೆ ಎಂದರು. ಇನ್ನೂ ಚುನಾವಣಾ ಆಯೋಗದ ಮುಂದೆ ಹೋಗಿ ದಾಖಲೆ ನೀಡಬೇಕಿತ್ತು. ಚುನಾವಣಾ ಆಯೋಗವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಸರಿಯಾಗಿ ಉಳಿದಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯೇ ಪಾಪರ್ ಆಗಿದ್ದೇವೆಂದು ಹೇಳಿದ್ದಾರೆ.
ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ ಮಾಡಿ ಕೇವಿಯಟ್ ರೀತಿಯಲ್ಲಿ ಮಾಡಿದ್ದಾರೆ. ಆದರೆ, ಇವರು ಹಾಕುವ ಪಟಾಕಿಗಳು ಠುಸ್ ಆಗಿದೆ. ಚುನಾವಣಾ ಆಯೋಗದ 45 ದಿನ ಗಡುವು ನೀಡಿದೆ. ಆ ಸಮಯದಲ್ಲಿ ಇವರು ಮಣ್ಣು ತಿನ್ನುತ್ತಿದ್ದರು. ದಾಖಲೆ ಇದ್ದರೆ ಆಗಲೇ ಕೋರ್ಟ್ಗೆ ಹೋಗಬೇಕಿತ್ತು. ಇದಕ್ಕೆ ಕಾಂಗ್ರೆಸ್ ಪಕ್ಷ ಉತ್ತರ ನೀಡಲಿ ಎಂದರು.



