ಬೆಂಗಳೂರು: ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದೆ.
Advertisement
ಲೋಕಾಯುಕ್ತ ತನಿಖೆ ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ. ಅದಲ್ಲದೆ ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.
ಇನ್ನೂ ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ. 100 ಕೋಟಿ ಇರಲಿ, 500 ಕೋಟಿ ಇರಲಿ, ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ. ಯಾರೂ ನಿಮ್ಮನ್ನು ತಡೆಯುತ್ತಿಲ್ಲ ಎಂದರು.