ಕೋಲಾರ : ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯ ಬಳಿ ಮಾತನಾಡಿದ ಅವರು, ಮೃತ ಶ್ರೀನಿವಾಸ ,ಜಿ.ಪಂ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು. ಜನಮನ್ನಣೆ ಗಳಿಸಿದ್ದ ವ್ಯಕ್ತಿಯ ನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
Advertisement
ಪೋಲಿಸರು ಟೀಂ ರೆಡಿ ಮಾಡಿ ತನಿಖೆ ಶುರು ಮಾಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕೊಲೆಗೆ ಯಾವುದರ ಲಿಂಕ್ ಇದೆ ಅನ್ನೋದು ಈಗಲೇ ಹೇಳೋಕೆ ಆಗಲ್ಲ. ಶೀಘ್ರವೇ ಬಂಧಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು.