ಹರಿಯಾಣ:- ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿರುವ ಘಟನೆ ಹರಿಯಾಣದ ರೋಹ್ಟಕ್ನ ಬಸ್ ನಿಲ್ದಾಣದ ಬಳಿ ಜರುಗಿದೆ.
22 ವರ್ಷದ ಹಿಮಾನಿ ನರ್ವಾಲಾ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತೆ ಎಂದು ಗುರುತಿಸಲಾಗಿದೆ. ಹಿಮಾನಿ ನರ್ವಾಲ್, ಭಾರತ್ ಜೋಡೋ ಯಾತ್ರೆ ಅವಧಿಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು. ಈ ವೇಳೆ ಹಿಮಾನಿ ರಾಹುಲ್ ಗಾಂಧಿ ಜೊತೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಗಮನ ಸೆಳೆದಿದ್ದರು. ಹಿಮಾನಿ ಸಾವಿನ ಸುತ್ತ ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದೆ.
ಇನ್ನೂ ಹಿಮಾನಿ ನರ್ವಾಲಾ ಅವರು ರೋಹ್ಟಕ್ನ ವಿಜಯ ನಗರದಲ್ಲಿ ವಾಸಿಸುತ್ತಿದ್ದರು. ನರ್ವಾಲಾ ಸಾವಿನ ಬೆನ್ನಲ್ಲೇ, ಕಾಂಗ್ರೆಸ್ ನಾಯಕರ ಜೊತೆಗಿನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.



