ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗಬಹುದು: ಕೆ ಎನ್ ರಾಜಣ್ಣ

0
Spread the love

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್​​ ಮತ್ತೆ ವೈಟ್‌ವಾಶ್ ಆಗಬಹುದು ಎಂದು ಮಾಜಿ‌ ಸಚಿವ ಕೆ ಎನ್ ರಾಜಣ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡೆರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು,

Advertisement

2004 ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್ ವಾಶ್ ಮಾಡಿದ್ದೆವು. ಕಾಂಗ್ರೆಸ್‌ ಅನ್ನು ಕಂಪ್ಲೀಟ್ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೇ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದಿದ್ದಾರೆ.

ಇನ್ನೂ ನಾನು ಮಧುಗಿರಿ ಕ್ಷೇತ್ರಕ್ಕೆ ಬಂದಾಗ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಿಡಿದು ರ‍್ಯಾಲಿ ಮಾಡುತಿದ್ದರು. ಇವತ್ತಿನ ರ‍್ಯಾಲಿಯಲ್ಲಿ ಯಾರೂ ಕಾಂಗ್ರೆಸ್ ಬಾವುಟ ಹಿಡಿಯಲೇ ಇಲ್ಲ. ಅವರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ತರಿಸಿದಂತಿದೆ. ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದರು.


Spread the love

LEAVE A REPLY

Please enter your comment!
Please enter your name here