ಬೆಳಗಾವಿ: 1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ನಗರದಲ್ಲಿ ಸಮಾವೇಶ ಆಯೋಜಿಸಿದ್ದೂ, ಈಗಾಗಲೇ ಎಲ್ಲಾರು ಆಗಮಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕರ ಹಾಗೂ ಸಚಿವರ ಜೊತೆಗೆ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಆಗಮಿಸಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಸಚಿವರಾದ ದಿನೇಶ ಗುಂಡೂರಾವ್, ಕೆ ಎನ್ ರಾಜಣ್ಣ ಜೊತೆಗೆ ಆಗಮಿಸಿರುವ ಎಸ್ ಟಿ ಸೋಮಶೇಖರ್ ಅವರು, ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರಾ? ಎನ್ನುವುದು ಇದೀಗ ಕುತೂಹಲ ಮೂಡಿಸಿದೆ.
ಇನ್ನೂ ಬಿಜೆಪಿ ಸಂವಿಧಾನ ವಿರೋಧಿ ಎಂದು ಬಿಂಬಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಘೋಷಣೆ ಮೂಲಕ ಬಿಜೆಪಿ ವಿರುದ್ಧ ದೇಶಾದ್ಯಂತ ಹೋರಾಟಕ್ಕೆ ಬೆಳಗಾವಿಯಿಂದಲೇ ಚಾಲನೆ ನೀಡಲಿದೆ.



