ಜೆಎಲ್ ಎನ್ ಸ್ಟೇಡಿಯಂ ನಿಂದ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ: ಸ್ಥಿತಿ ಗಂಭೀರ!

0
Spread the love

ಕೊಚ್ಚಿ:- ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರು ಭಾನುವಾರ ಸಂಜೆ ಇಲ್ಲಿನ ಜವಾಹರಲಾಲ್ ನೆಹರು ಅಂತಾರಾಷ್ಟ್ರೀಯ ಕ್ರೀಡಾಂಗಣದ ವಿಐಪಿ ಗ್ಯಾಲರಿಯಿಂದ 20 ಅಡಿ ಕೆಳಗೆ ಬಿದ್ದಿರುವ ಘಟನೆ ಜರುಗಿದೆ.

Advertisement

ಕೆಳಗೆ ಬಿದ್ದ ಪರಿಣಾಮ ಶಾಸಕಿಗೆ ಗಂಭೀರ ಗಾಯವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನೆಯಲ್ಲಿ ಉಮಾ ಥಾಮಸ್ ಅವರ ಮೆದುಳು, ಶ್ವಾಸಕೋಶಗಳು, ಮತ್ತು ಬೆನ್ನು ಮೂಳೆಗೆ ತೀವ್ರ ಗಾಯಗಳಾಗಿದೆ. ಕೊಚ್ಚಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ.

ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ. ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನಡೆಯುತ್ತಿತ್ತು. ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ಅವರನ್ನು ಸ್ವಾಗತಿಸಿದ ನಂತರ, ಶಾಸಕಿ ಥಾಮಸ್ ವಿಐಪಿ ಪೆವಿಲಿಯನ್‌ನಲ್ಲಿ ತಮ್ಮ ಆಸನದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸ್ಥಳದಲ್ಲಿದ್ದ ವೈದ್ಯಕೀಯ ತಂಡ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ. ಉಮಾ ತಲೆಗೆ ಗಾಯವಾಗಿದ್ದು, ಹಲವು ಕಡೆ ಮೂಳೆ ಮುರಿತಗಳಾಗಿವೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here