ಶಿವಮೊಗ್ಗ;- ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ಹಣದ ಆಮೀಷ ತೋರಿಸಲಾಗುತ್ತಿದೆ ಎಂದು ಆಯನೂರು ಮಂಜುನಾಥ ಹೇಳಿದ್ದಾರೆ.ಈ ಸಂಬಂಧ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ. ಆದರೆ ಕೇವಲ 5 ತಿಂಗಳೊಳಗೆ ಬಿಜೆಪಿ ಅಧಿಕಾರವಿಲ್ಲದೇ ಒದ್ದಾಡುತ್ತಿದೆ. ಅದಕ್ಕಾಗಿ ತಲಾ ₹50 ಕೋಟಿ ಹಣದ ಆಮಿಷವೊಡ್ಡಿ ಕಾಂಗ್ರೆಸ್ ಶಾಸಕರ ಮನೆಯ ಬಾಗಿಲನ್ನು ಬಡಿಯುತ್ತಿದ್ದಾರೆ. ಸರ್ಕಾರ ಬೀಳಿಸುವ ಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯತ್ನಕ್ಕೆ ಯಶಸ್ಸು ಸಿಗುವುದಿಲ್ಲ. ಮಾಜಿ ಸಚಿವ ಈಶ್ವರಪ್ಪ ಸಹ ಸರ್ಕಾರ ಬೀಳಿಸುತ್ತೇವೆ, ಬೀಳಿಸಿದರೆ ತಪ್ಪೇನು ಎಂದಿದ್ದಾರೆ ಎಂದು ಕಿಡಿಕಾರಿದರು.
ಈಶ್ವರಪ್ಪ ಅವರಿಗೆ ಪ್ರಜಾಪ್ರಭುತ್ವ ಗೊತ್ತಿಲ್ಲ. ಅವರು ಸಂವಿಧಾನ ಓದಿಲ್ಲ. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾಗ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಈಶ್ವರಪ್ಪ ಕೊಡುಗೆಯೇನು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಪ್ರಶ್ನಿಸಿದರು