ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದರು.
ಇದಕ್ಕೂ ಮೊದಲು, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಚಿವ ಜಮೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದ್ದರು.



