ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಆಕ್ಷೇಪವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.
ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಬಹಿರಂಗ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ಅವರು ಚುನಾವಣಾ ನಿಯಮಗಳಲ್ಲಿನ ರೂಲ್ 39 ಅನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ವಾದಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಮತವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿತ್ತು.
ಆದರೆ, ವಿಚಾರಣೆ ನಡೆಸಿದ ಚುನಾವಣಾಧಿಕಾರಿಗಳು ಮತಗಟ್ಟೆಯೊಳಗೆ ಯಾವುದೇ ರೀತಿಯ ನಿಯಮ ಉಲ್ಲಂಘನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿ ಕಾಂಗ್ರೆಸ್‌ನ ಆಕ್ಷೇಪವನ್ನು ತಳ್ಳಿ ಹಾಕಿದರು.
ಇದೇ ವೇಳೆ, ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಬಸವರಾಜ್ ರಾಯರೆಡ್ಡಿ ಕೊನೆಯದಾಗಿ ಮತ ಚಲಾಯಿಸುವ ಮೂಲಕ ಮತದಾನಕ್ಕೆ ತೆರೆ ಬಿದ್ದಿದೆ.



