ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನ ಗೆಲ್ಲುವ ಚಾಳಿ ಮಾಡಿಕೊಂಡಿದೆ: HDK ಆರೋಪ

0
Spread the love

ರಾಮನಗರ: ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು,

Advertisement

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಾಬಾರದು ಎಂದು ಮನವಿ ಮಾಡಿದರು. 

ಇನ್ನೂ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ 3 ಸಾವಿರ, 5 ಸಾವಿರ ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು.

ಚುನಾವಣೆ ಮುಗಿದ ಮೇಲೆ ಆ ಕೂಪನ್‌ಗಳನ್ನು ಬೆಂಗಳೂರಿನ ಲೂಲೂ ಮಾಲ್‌ಗೆ ಹೋಗಿ ಕೊಡಿ. ನಿಮಗೆ ಬೇಕಾದ ವಸ್ತುವನ್ನು ಖರೀದಿ ಮಾಡಿ ಎಂದು ಆಮಿಷ ಒಡ್ಡಿದ್ದರು. ಇದನ್ನು ನಂಬಿ ಕೂಪನ್ ಹಿಡಿದುಕೊಂಡು ಲೂಲೂ ಮಾಲ್‌ಗೆ ಹೋದರೆ ಅಲ್ಲಿ ಕೂಪನ್ ಇಲ್ಲ, ವಸ್ತುಗಳೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here