ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್” ಬೃಹತ್ ಸಮಾವೇಶದ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿ ಭಾರತ ಸಮಾವೇಷವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಹೇಳಿದರು.

Advertisement

ಇನ್ನೂ ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು. ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು. ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ, ಎಲ್ಲಾ ಪಕ್ಷದವರಿಗೂ ಸಮಾವೇಷಕ್ಕೆ ಸ್ವಾಗತ ಎಂದರು.


Spread the love

LEAVE A REPLY

Please enter your comment!
Please enter your name here