ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸದನದಲ್ಲೇ ಒಪ್ಪಿದ್ದಾರೆ.
Advertisement
ಮೈಸೂರಿನ ಮುಡಾ ಹಗರಣದಲ್ಲೂ ಸಿದ್ದರಾಮಯ್ಯ ಅದೇ ರೀತಿ ಹೇಳಿದ್ರು. ಆದರೆ ಯಾವುದೇ ಪರಿಹಾರ ನಿರೀಕ್ಷೆ ಮಾಡದೇ ನಿವೇಶನ ಹಿಂದೆ ಕೊಟ್ಟಿದ್ದಾರೆ. ಮೊದಲು ಪರಿಹಾರ ಕೊಡಿ ಎಂದಿದ್ದ ಸಿದ್ದರಾಮಯ್ಯ ಈಗ ಪರಿಹಾರ ಕೇಳದೇ ಹಿಂದಿರುಗಿಸಿದ್ದಾರೆ. ಈ ಮೂಲಕ ತಪ್ಪು ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.