ಮಂಗಳೂರು: ಕಾಂಗ್ರೆಸ್ ಪಕ್ಷವು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರ ನಾಯಕತ್ವದಲ್ಲಿ ಮುನ್ನಡೆಯಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗಳೂರಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಪಕ್ಷದ ಹಿರಿಯ ನಾಯಕರು ಮತ್ತು ಉಪಮುಖ್ಯಮಂತ್ರಿಗಳು ಎಂದು ಹೇಳಿದ್ದಾರೆ.
Advertisement
ಕಾಂಗ್ರೆಸ್ ಪಕ್ಷವು ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರ ನಾಯಕತ್ವದಲ್ಲಿಯೂ ಪಕ್ಷವು ಮುನ್ನಡೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇನ್ನೂ ಸಚಿವ ಸ್ಥಾನ, ಉಪಮುಖ್ಯಮಂತ್ರಿ ಸ್ಥಾನ, ಮುಖ್ಯಮಂತ್ರಿ ಸ್ಥಾನಗಳ ಬದಲಾವಣೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ತಕ್ಷಣ ಆಗುವುದಿಲ್ಲ. ಅದು ಯಾವಾಗ, ಏಕೆ, ಹೇಗೆ, ಎಲ್ಲಿ ನಡೆಯಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದೂ ಸ್ಪಷ್ಟಪಡಿಸಿದ್ದಾರೆ.