ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುತ್ತಿದೆ. ಅದರಂತೆ ಧಾರವಾಡದಲ್ಲಿಯೂ ಕೂ ಕೈ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದಾರೆ.
ಕಲಾಭವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಜ್ಯುಬಿಲಿ ಸರ್ಕಲ್, ಕೋರ್ಟ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿಸಿದರು. ಇನ್ನೂ ರಾಜ್ಯಪಾಲರ ಭಾವಚಿತ್ರ ಕಾಲಿನಿಂದ ತುಳಿದು ಆಕ್ರೋಶ ವ್ಯಕತಪಡಿಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರುಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯಪಾಲರ ಭಾವಚಿತ್ರಕ್ಕೆ ಅಗೌರವ ತೋರಿಸಿ ಗೋ ಬ್ಯಾಕ್ ಗರ್ವನರ್ ಎಂದು ಘೋಷಣೆ ಕೂಗುತ್ತ ರಾಜ್ಯಪಾಲರ ಭಾವಚಿತ್ರ ತುಳಿದು ಕುಣಿದಾಡಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಎನ್.ಎಚ್. ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಇತರರು ಭಾಗಿಯಾಗಿದ್ದರು.