ಬೆಂಗಳೂರು: ಕೇಂದ್ರ ಸರ್ಕಾರದಿಂದ ಗ್ಯಾಸ್ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಎಂ ಸಿದ್ದರಾಮಯ್ಯಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
Advertisement
ಶಾಸಕರು, ಸಚಿವರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಭಾಗದಿಂದಲೂ ಕಾರ್ಯಕರ್ತರು ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು.
ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಸಿಲಿಂಡರ್ ದರ 413 ರೂಪಾಯಿ ಇತ್ತು. ಈಗ 850 ರೂಪಾಯಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಗುಡುಗಿದ್ದಾರೆ.